ಉಡುಪಿ: ನಿಗೂಢವಾಗಿ ಸಾವನ್ನಪ್ಪಿರುವ ಯುವತಿ

ಉಡುಪಿ: ಪರಿಚಯವಿದ್ದ  ಯುವತಿ ಅಸ್ವಸ್ಥಳಾದ ಕೂಡಲೇ ಯುವಕ ಕೈ ಕೊಟ್ಟ ಘಟನೆ ಉಡುಪಿಯಲ್ಲಿ ನಡೆದಿದೆ.ಚಿಂತಾಜನಕ ಸ್ಥಿತಿಯಲ್ಲಿದ್ದ ಯುವತಿಯನ್ನು ಆಸ್ಪತ್ರೆಗೆ ಬಿಟ್ಟು ಯುವಕ ನಾಪತ್ತೆ ಯಾಗಿದ್ದಾನೆ.ದಾಖಲಾದ ಕೆಲವೇ ಹೊತ್ತಿನಲ್ಲಿ ಯುವತಿ  ಮೃತಪಟ್ಟಿದ್ದಾಳೆ.ರಕ್ಷಿತಾ ನಾಯಕ್ ನಿಗೂಢವಾಗಿ ಸಾವನ್ನಪ್ಪಿರುವ ಯುವತಿಯಾಗಿದ್ದಾಳೆ. ಶನಿವಾರ 6:30 ಹೊತ್ತಿಗೆ ರಿಕ್ಷಾದಲ್ಲಿ ಯುವತಿಯನ್ನು ಕರೆದು ತಂದಿದ್ದ ಯುವಕ ,ರಕ್ಷಿತಾಳ  ಮನೆಯವರಿಗೆ ಕರೆಮಾಡಿ ವಿಷಯ ತಿಳಿಸಿ  ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾನೆ.
 ಹಿರಿಯಡ್ಕ ಠಾಣಾ ವ್ಯಾಪ್ತಿಯ ಕುಕ್ಕೆಹಳ್ಳಿ ನಿವಾಸಿಯಾಗಿರುವ ರಕ್ಷಿತಾ,  ಕೆಲಸ ಮತ್ತು ಶಿಕ್ಷಣದ ಉದ್ದೇಶಕ್ಕಾಗಿ ಉಡುಪಿ ನಗರದ ಅಂಬಾಗಿಲಿನಲ್ಲಿ ವಾಸ್ತವ್ಯವಿದ್ದಳು.
 ಹದಿನೈದು ದಿನಕ್ಕೊಮ್ಮೆ ಮನೆಗೆ ಹೋಗಿ ಬರುತ್ತಿದ್ದ ರಕ್ಷಿತಾ,  ಪ್ರಶಾಂತ್ ಕುಂದರ್  ಜತೆ ಸ್ನೇಹ ಬೆಳೆಸಿಕೊಂಡಿದ್ದಳು.  ಇದೀಗ ಅನುಮಾನಾಸ್ಪದವಾಗಿ ಮೃತ ಪಟ್ಟ ರಕ್ಷಿತಳದ್ದು ಕೊಲೆಯೆ ಎಂಬ ಅನುಮಾನ ಕಾಡುತ್ತಿದ್ದು,ಪ್ರಶಾಂತ್   ಪತ್ತೆಗಾಗಿ  ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ರಕ್ಷಿತಾಳ ಮೃತದೇಹ ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಯಲ್ಲಿ ಇರಿಸಲಾಗಿದೆ.
 ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ.

Leave a Reply