ಕರಾವಳಿಗೆ ಪ್ರತ್ಯೇಕ ಮರಳು ನೀತಿಗೆ ಕರಾವಳಿ ಶಾಸಕರಿಂದ ಸಿ ಎಂ ಗೆ ಮನವಿ

ಬೆಂಗಳೂರು:
ಕರಾವಳಿಯ ಮೂರು ಜಿಲ್ಲೆಗಳಿಗೆ ಪ್ರತ್ಯೇಕ ಮರಳು ನೀತಿ ಜಾರಿಗೆ ತರಬೇಕು ಹಾಗೂ ಮರಳು ಗಣಿಗಾರಿಕೆ ನಿಯಮಗಳಿಗೆ ತಿದ್ದುಪಡಿ ತರಬೇಕು ಎಂದು ಕರಾವಳಿ ಶಾಸಕರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು.

ಕರಾವಳಿಯ ಮೂರು ಜಿಲ್ಲೆಗಳ ನದಿಯಲ್ಲಿ ಮುಳುಗಿ ಮರಳು ತೆಗೆಯುವ ಕ್ರಮ ಬಹಳ ಹಿಂದಿನಿಂದಲೂ ಇದೆ. ಅದನ್ನು ಮುಂದುವರಿಸಬೇಕು.ಕರಾವಳಿಯಲ್ಲಿ ಸಾಂಪ್ರದಾಯಿಕ ರೀತಿಯಲ್ಲಿ ಮರಳು ತೆಗೆಯುತ್ತಿದ್ದು, ಇತರ ಜಿಲ್ಲೆಗಳ ನಿಯಮಗಳು ಇಲ್ಲಿಗೆ ಅನ್ವಯಿಸುವುದಿಲ್ಲ
ಅದಕ್ಕಾಗಿ ನದಿಯಲ್ಲಿ ಮರಳು ಗಣಿಗಾರಿಕೆ ನಿಷೇಧವನ್ನು ತೆಗೆಯಬೇಕು. ಇದು ಕೇವಲ ಕರಾವಳಿಗೆ ಜಿಲ್ಲೆಗಳಿಗೆ ಮಾತ್ರ ಅನ್ವಯ ಆಗಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿದರು.

ಮಳೆಹಾನಿ ಪರಿಹಾರ ಬಿಡುಗಡೆ ಮಾಡಿ:
ದ.ಕ ಜಿಲ್ಲೆಯಲ್ಲಿ ಭಾರೀ ವರ್ಷಧಾರೆಯಿಂದ
ಅಪಾರ ಹಾನಿಯಾಗಿದ್ದು ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ವಿತರಣೆಗೆ ಸರಕಾರ ಪರಿಹಾರ ಧನ ಬಿಡುಗಡೆ ಮಾಡಬೇಕು ಎಂದು ಈ ಸಂದರ್ಭ ಒತ್ತಾಯಿಸಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್,
ಶಾಸಕರಾದ ಡಾ.ಭರತ್ ಶೆಟ್ಟಿ ವೈ,ವೇದವ್ಯಾಸ ಕಾಮತ್,ಉಮಾನಾಥ ಕೋಟ್ಯಾನ್,ಸಂಜೀವ ಮಠಂದೂರು,ಅಂಗಾರ,ರಾಜೇಶ್ ನಾೈಕ್ ಉಪಸ್ಥಿತರಿದ್ದರು.

Leave a Reply