ಕರೆ ಮಾಡಿ, ಪಹಣಿ ಮನೆಗೆ

ಕಂದಾಯ ಇಲಾಖೆ ಶೀಘ್ರದಲ್ಲಿ ಆರಂಭಿಸಲಿರುವ ಸಹಾಯವಾಣಿಗೆ ಕರೆ ಮಾಡಿದ 72 ಗಂಟೆಯೊಳಗೆ ಪಿಂಚಣಿದಾರರಿಗೆ ಮಂಜೂರಾತಿ ಪತ್ರ ತಲುಪಿಸುವ ಯೋಜನೆ ಜಾರಿಗೆ ತರಲಾಗುವುದು ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದರು. ಬಿಜೆಪಿಯ ಪಿಎಂ ಮುನಿರಾಜು ಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ವಿವಿಧ ವರ್ಗಗಳಿಗೆ ನೀಡುವ ಮಾಸಾಶನ ಯೋಜನೆಗಳು ಸರಿಯಾಗಿ ತಲುಪುತ್ತಿಲ್ಲ. ವಿಳಂಬವಾಗುತ್ತಿದೆ ಎಂಬ ದೂರುಗಳು ಕೇಳಿ ಬರುತ್ತಿವೆ. ಈ ಹಿನ್ನಲೆಯಲ್ಲಿ ಮನೆ ಬಾಗಿಲಿಗೆ ಪಿಂಚಣಿ ಯೋಜನೆ ಮಂಜೂರಾತಿ ಪತ್ರ ನೀಡುವ ಯೋಜನೆ ಆರಂಭಿಸಲು ಉದ್ದೇಶಿಸಿದ್ದು, ಇದಕ್ಕಾಗಿ ಹೊಸ ಸಾಫ್ಟವೇರ್ ಕೂಡ ರೂಪಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

Leave a Reply