ಕಲ್ಲಡ್ಕ ಭೇಟಿಯಾದ ಮುತಾಲಿಕ್

ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಕಲ್ಲಡ್ಕ ಭಟ್ ಅವರನ್ನು ಮಂಗಳೂರಿನ ನಿವಾಸದಲ್ಲಿ ಭೇಟಿಯಾದ ಮುತಾಲಿಕ್, ಭಟ್ ಅವರ ಆರೋಗ್ಯ ವಿಚಾರಿಸಿ ವಿವಿಧ ವಿಚಾರಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ಕಲ್ಲಡ್ಕ ಪ್ರಭಾಕರ್ ಭಟ್ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಬೈಪಾಸ್ ಶಸ್ತ್ರಚಿಕಿತ್ಸೆಗೆ ಒಳಗಾಗಿ ನಗರದಲ್ಲಿರುವ ಪುತ್ರಿಯ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.

Leave a Reply