ಕೋಟಾ ಜೊತೆ ದಲಿತ ಮುಖಂಡರ ಚರ್ಚೆ

 ರಾಜ್ಯ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಸಚಿವರಾದ ಕೋಟಾ ಶ್ರೀನಿವಾಸ್ ಪೂಜಾರಿಯವರನ್ನು ದ ಕ ಜಿಲ್ಲೆಯ ದಲಿತ ಸಂಘಟನೆಗಳ ಮುಖಂಡರು ಭೇಟಿ ಮಾಡಿ ದಲಿತರ ವಿವಿಧ ಸಮಸ್ಯೆಗಳನ್ನು ಚರ್ಚಿಸಲಾಯಿತು.
ಮುಖ್ಯವಾಗಿ,
1)ಮಂಗಳೂರು ಮಹಾ ನಗರ ಪಾಲಿಕೆಯಲ್ಲಿ ಹೊರಗುತ್ತಿಗೆಯಲ್ಲಿ ದುಡಿಯುವ ಒಳ ಚರಂಡಿ ವಿಭಾಗದ ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡದ, ಹಿಂದುಳಿದ 82 ಮಂದಿ ಕಾರ್ಮಿಕರನ್ನು ಖಾಯಂ ಗೊಳಿಸಬೇಕು.
2)ದ ಕ ಜಿಲ್ಲೆಯಲ್ಲಿ ದಲಿತರಿಗೆ ಮೀಸಲಿಟ್ಟ ಡಿ ಸಿ ಮನ್ನಾ ಭೂಮಿಯನ್ನು ಸಚಿವ ಸಂಪುಟ ಸಭೆಯಲ್ಲಿ ಮಂಜೂರು ಗೊಳಿಸಬೇಕು.
3)ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಅರ್ಹ ಫಲಾನುಬಾವಿಗಳಿಗೆ ಸ್ವ ಉದ್ಯೋಗ ಮಾಡಲು ಬ್ಯಾಂಕ್ ಗಳಲ್ಲಿ ಸಾಲ ಮಂಜೂರಾತಿ ಗೊಳಿಸಲು ಆದೇಶಿಸಬೇಕು.
4)ಪರಿಶಿಷ್ಟ ಜಾತಿ -ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಶಾಲಾ ಮುಖ್ಯಸ್ಥರು ಶಾಲಾ ಶುಲ್ಕವನ್ನು ಭರಿಸಲು ಒತ್ತಡ ಹೇರುವ ಬಗ್ಗೆ ದೂರು ನೀಡಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಜಿಲ್ಲಾ ಸಂಚಾಲಕರಾದ ಜಗದೀಶ್ ಪಾಂಡೇಶ್ವರ, ವಿವಿಧ ದಲಿತ ಸಂಘಟನೆಯ ಮುಖಂಡರುಗಳಾದ ವಿಶ್ವನಾಥ್ ಬಂಟ್ವಾಳ,ಜಿನ್ನಪ್ಪ ಮೂಡಬಿದ್ರೆ,ಪ್ರಕಾಶ್ ಹಳ್ಳಿಪಾದೆ, ಕಾರ್ಮಿಕರುಗಳಾದ ಸಂತೋಷ್,ವಿನೋದ್, ಮುಂತಾದವರು ಉಪಸ್ಥಿತರಿದ್ದರು.

Leave a Reply