ತುಳುವನ್ನು ಅಧಿಕೃತ ಭಾಷೆಗೊಳಿಸಲು ಪ್ರಮೋದ್ ಮನವಿ

ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯಾಗಿ ಸ್ಥಾನಮಾನ ನೀಡಲು ಕ್ರಮವಹಿಸುವಂತೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಕನ್ನಡ ಮತ್ತು ಸಂಸ್ಕೃತಿ ಸಚಿವರೂ ಆಗಿರುವ ಇಂಧನ ಸಚಿವ ಸುನೀಲ್ ಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಗೋವಾದಲ್ಲಿಯೂ ಮೊದಲು ಕೊಂಕಣಿಯನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿ ಘೋಷಿಸಿ, ಮುಂದೆ ಸಂವಿಧಾನದ 8 ನೇ ಪರಿಚ್ಚೇದಕ್ಕೆ ಸೇರಿಸಲು ಸಾಧ್ಯವಾಯಿತು. ಅಂತೆಯೇ ತುಳು ಭಾಷೆಗೆ ರಾಜ್ಯದ ಅಧಿಕೃತ ಭಾಷೆಯನ್ನಾಗಿ ಮಾಡಿದರೆ ಮುಂದೆ ಸಂವಿಧಾನದ 8 ನೇ ಪರಿಚ್ಚೇದಕ್ಕೆ ಸೇರಿಸಲು ಸುಲಭವಾಗುತ್ತದೆ ಎಂದು ಸಲಹೆ ನೀಡಿದ್ದಾರೆ.

Leave a Reply