ಪಡುಬಿದ್ರಿ ಬಂಟರ ಸಂಘದಲ್ಲಿ ವಿಶ್ವ ಮಹಿಳಾ ದಿನಾಚರಣೆ

ಪಡುಬಿದ್ರಿ ಬಂಟರ ಸಂಘದ ಮಹಿಳಾ ವಿಭಾಗದ ವತಿಯಿಂದ ಮಂಗಳವಾರ ವಿಶ್ವ ಮಹಿಳಾ ದಿನಾಚರಣೆ ನಡೆಯಿತು.

ಕಾರ್ಯಕ್ರಮವನ್ನು ಜಿಲ್ಲಾ ಲಯನ್ಸ್ ಜಿಲ್ಲಾ ಕಾರ್ಡಿನೇಟರ್ ಶ್ರೀಮತಿ ರಂಜನ ಶ್ರೀಧರ್ ಶೆಟ್ಟಿ ಉದ್ಘಾಟಿಸಿದರು

ಈ ಸಂದರ್ಭ ಅವರು ಮಾತನಾಡಿ, ಮಹಿಳೆಯರ ಈಗ ಎಲ್ಲ ರಂಗದಲ್ಲಿಯೂ ತನ್ನನ್ನು ತೊಡಗಿಸಿಕೊಂಡಿದ್ದು, ಪುರುಷರಿಗೆ ಸರಿಸಮಾನಾಗಿ ಹೆಜ್ಜೆ ಹಾಕುತ್ತಿರುವುದು ಸಂತಸದ ಸಂಗತಿಯೆಂದರು.

ಈ ಸಂದರ್ಭ ದಂತವೈದ್ಯೆ ಡಾಕ್ಟರ್ ಸೌಮ್ಯಲತಾ ಕೆ ಶೆಟ್ಟಿ, ರಾಷ್ಟ್ರೀಯ ಪವರ್ ಲಿಫ್ಟರ್ ಕುಮಾರಿ ಸೀಯ ಶೆಟ್ಟಿ, ಡಾ. ಸ್ಪೂರ್ತಿ ಶೆಟ್ಟಿಯವರನ್ನು ವೇದಿಕೆಯಲ್ಲಿ ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಪಡುಬಿದ್ರಿ ಬಂಟರ ಸಂಘದ ಮಹಿಳಾ ಘಟಕದ ಅಧ್ಯಕ್ಷೆ ನೇತ್ರಾವತಿ ಆರ್ ಶೆಟ್ಟಿ, ಸುರತ್ಕಲ್ ಜೆಸಿಐ ಅಧ್ಯಕ್ಷೆ ರಾಜೇಶ್ವರಿ ಡಿ ಶೆಟ್ಟಿ, ಬಂಟ್ಸ್ ವೆಲ್ ಫೇರ್ ಟ್ರಸ್ಟ್ ಅಧ್ಯಕ್ಷ ಶಶಿಧರ್ ಕೆ ಶೆಟ್ಟಿ, ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ, ಪಡುಹಿತ್ಲು ಕೋಶಾಧಿಕಾರಿ ರವಿ ಶೆಟ್ಟಿ ಗುಂಡ್ಲಾಡಿ , ಯುವ ಬಂಟರ ಸಂಘದ ಅಧ್ಯಕ್ಷ ನವೀನ ಎನ್ ಶೆಟ್ಟಿ ಮಹಿಳಾ ಘಟಕ ದ ಕಾರ್ಯದರ್ಶಿ ಜ್ಯೋತಿ ಎಸ್ ಶೆಟ್ಟಿ, ಕೋಶಾಧಿಕಾರಿ ಜಯಂತಿ ಎಸ್ ಶೆಟ್ಟಿ, ಉಪಸ್ಥಿತರಿದ್ದರು.

Leave a Reply