ಮುದರಂಗಡಿ ಗ್ರಾಮ ಪಂಚಾಯತ್ ನೂತನ ತ್ಯಾಜ್ಯ ಘಟಕ ಉದ್ಘಾಟನೆ

ಮುದರಂಗಡಿ ಗ್ರಾಮ ಪಂಚಾಯಿತಿಯ ನೂತನ ತ್ಯಾಜ್ಯ ಘಟಕವನ್ನು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಹಾಗೂ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಶನಿವಾರ ಉದ್ಘಾಟಿಸಿದರು.
ಈ ಸಂದರ್ಭ ಯುಪಿಸಿಎಲ್ ಅದಾನಿ ಕಂಪನಿಯು ತ್ಯಾಜ್ಯ ಸಂಗ್ರಹಣಾ ಘಟಕಕ್ಕೆ ನೀಡಿದ ತ್ಯಾಜ್ಯ ಸಂಗ್ರಹ ವಾಹನದ ಕೀಲಿಕೈಯನ್ನು ಶಾಸಕ ಲಾಲಾಜಿ ಆರ್ ಮೆಂಡನ್, ಮುದರಂಗಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶರತ್ ಶೆಟ್ಟಿ ಅವರಿಗೆ ಹಸ್ತಾಂತರಿಸಿದರು.
ಈ ಸಂದರ್ಭ ಲಾಲಾಜಿ ಆರ್ ಮೆಂಡನ್ ಮಾತನಾಡಿ, ಯುಪಿಸಿಎಲ್ ಕಂಪನಿಯು ಸಮಾಜಮುಖಿ ಕೆಲಸ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಪರಿಸರದ ಎಲ್ಲಾ ಗ್ರಾಮ ಪಂಚಾಯತಿಗಳಿಗೆ ಸಹಾಯ ಮಾಡುತ್ತಿದೆ ಈ ಸಹಕಾರ ಮುಂದುವರಿಯಲಿ ಎಂದರು.
ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್, ಜಿಲ್ಲಾ ಪಂಚಾಯತ್ ವಿಸ್ತರಣಾಧಿಕಾರಿ ಡಾ|| ನವೀನ ಭಟ್, ಕುಂದಾಪುರ ಸಹಾಯಕ ಕಮಿಷನರ್ ರಾಜು ಕೆ, ಕಾಪು ತಹಸೀಲ್ದಾರ್ ಶ್ರೀನಿವಾಸಮೂರ್ತಿ ಕುಲಕರ್ಣಿ ಕಾಪು ತಾಲೂಕು ಕಾರ್ಯನಿರ್ವಾಹಣಾಧಿಕಾರಿ ಶಿವಪ್ರಸಾದ್, ಅದಾನಿ ಕಂಪನಿಯ ಕಿಶೋರ್ ಅಳ್ವ, ರವಿ ಜೆರೆ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಶಿಲ್ಪಾ ಸುವರ್ಣ ಉಪಸ್ಥಿತರಿದ್ದರು.

Leave a Reply