ರಾಜ್ಯದ ಪಠ್ಯಪುಸ್ತಕದಲ್ಲಿ ಭಗವದ್ಗೀತೆ

ರಾಜ್ಯದ ಪಠ್ಯಪುಸ್ತಕದಲ್ಲಿ ಭಗವದ್ಗೀತೆ ಅಳವಡಿಸುವ ಸಂಬಂಧ ಹಲವೆಡೆಯಿಂದ ಬೇಡಿಕೆ ಬಂದಿದ್ದು, ಈ ಬಗ್ಗೆ ರಾಜ್ಯ ಸರಕಾರ ಗಂಭೀರ ಚಿಂತನೆ ನಡೆಸಿದೆ. ಗುಜರಾತ್ ಮಾದರಿಯಲ್ಲಿ ರಾಜ್ಯದ ಪಠ್ಯಪುಸ್ತಕದಲ್ಲಿ ಭಗವದ್ಗೀತೆ ಸೇರ್ಪಡೆಗೊಳಿಸುವ ಸಂಬಂಧ ಚರ್ಚೆ ಆರಂಭವಾಗಿದ್ದು, ಈ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ತೀರ್ಮಾನ ಮಾಡುವುದಾಗಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ಸಚಿವ ಮುರುಗೇಶ್ ನಿರಾಣಿ ಮಾತನಾಡಿ, ಭಗವದ್ಗೀತೆಯಲ್ಲಿ ಮಾನವೀಯ ಮೌಲ್ಯವಿದೆ. ಅದನ್ನು ಮಕ್ಕಳು ಓದುವ ಅಗತ್ಯವಿದೆ. ಅದರಿಂದ ಮಕ್ಕಳ ಜ್ಞಾನ ವೃದ್ಧಿಯಾಗುತ್ತದೆ. ಈಗಾಗಲೇ ಗುಜರಾತ್ ರಾಜ್ಯ ಸರಕಾರ ಪಠ್ಯಕ್ರಮದಲ್ಲಿ ಸೇರಿಸಲು ಮುಂದಾಗಿದೆ. ನಮ್ಮ ರಾಜ್ಯದಲ್ಲೂ ಪಠ್ಯಕ್ರಮದಲ್ಲಿ ಸೇರಿಸಲು ಕೆಲಸವಾಗಬೇಕು ಎಂದು ಹೇಳಿದ್ದಾರೆ.

Leave a Reply