ಹತ್ರಸ್​ ಪ್ರಕರಣ: ವಿಧಿ ವಿಜ್ಞಾನ ವರದಿ ಅನ್ವಯ ಯುವತಿ ಮೇಲೆ ಅತ್ಯಾಚಾರವಾಗಿಲ್ಲ ಎಂದ ಪೊಲೀಸ್​ ಅಧಿಕಾರಿ

ಲಕ್ನೋ : ಹತ್ರಸ್​ನಲ್ಲಿ ನಡೆದ ದಲಿತ ಯುವತಿಯ ಮೇಲಿನ ಅತ್ಯಾಚಾರದ ಕುರಿತು ದೇಶಾದಾದ್ಯಂತ ಖಂಡನೆ ವ್ಯಕ್ತವಾಗುತ್ತಿದೆ. ಅನೇಕ ಸಂಘಟನೆ ಮತ್ತು ರಾಜಕೀಯ ಪಕ್ಷಗಳು ಉತ್ತರ ಪ್ರದೇಶದ ಸರ್ಕಾರದ  ಕುರಿತು  ಟೀಕಿಸುತ್ತಿವೆ. ಯುವತಿಯ ಕುಟುಂಬಕ್ಕೆ ಕೊನೆಯ ಬಾರಿ ಕೂಡ ಸಂತ್ರಸ್ತೆ ಮುಖ ನೋಡಲು   ಪೊಲೀಸರು ಅಸ್ಪದ ನೀಡಲಿಲ್ಲ ಎಂದು ಯುವತಿ ಕುಟುಂಬ ಆರೋಪಿಸಿದೆ.  ಈಗ ಈ ಕುರಿತು ಮಾತನಾಡಿರುವ ಹಿರಿಯ ಅಧಿಕಾರಿಗಳು ಸಂತ್ರಸ್ತೆ ಮೇಲೆ ಅತ್ಯಾಚಾರ ನಡೆದೆ ಇರಲಿಲ್ಲ ಎಂದು ವಿಧಿ ವಿಜ್ಞಾನ ಪರೀಕ್ಷೆ ಪರೀಕ್ಷೆ ವರದಿ ತಿಳಿಸಿದೆ ಎಂದು ತಿಳಿಸಿದ್ದಾರೆ. ಯುವತಿ ಮೇಲೆ ಯಾವುದೇ ಅತ್ಯಾಚಾರ ನಡೆದಿರಲಿಲ್ಲ ಎಂದು ವರದಿ ಸ್ಪಷ್ಟಪಡಿಸಿದೆ ಎಂದು ಹೆಚ್ಚುವರಿ ಪೊಲೀಸ್​ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್​ ಕುಮಾರ್​ ಹೇಳಿದ್ದಾರೆ. ಮರಣೋತ್ತರ ಪರೀಕ್ಷೆಯಲ್ಲಿ ಸಂತ್ರಸ್ತೆ ಕತ್ತಿಗೆ ಮುರಿತದಿಂದ ಆದ ಗಂಭೀರ ಗಾಯದಿಂದ ಮೃತಪಟ್ಟಿದ್ದಾಳೆ ಎಂದು ತಿಳಿಸಿದೆ. ವಿಧಿ ವಿಜ್ಞಾನ ಪರೀಕ್ಷೆಯಲ್ಲಿ ಯುವತಿಯ ದೇಹದಲ್ಲಿ ಯಾವುದೇ ವೀರ್ಯದ ಗುರುತು ಪತ್ತೆಯಾಗಿಲ್ಲ ಎಂದಿದ್ದಾರೆ.

ಸೆಪ್ಟೆಂಬರ್ 14ರಂದು ಉತ್ತರ ಪ್ರದೇಶದ ಹತ್ರಾಸ್ ಎಂಬ ಹಳ್ಳಿಯಲ್ಲಿ ತನ್ನ ಕುಟುಂಬದೊಂದಿಗೆ ಹೊಲದಲ್ಲಿ ಹುಲ್ಲು ಕತ್ತರಿಸುತ್ತಿದ್ದ 19 ವರ್ಷದ ಯುವತಿಯನ್ನು ಆಕೆಯ ದುಪಟ್ಟಾದಿಂದ ಎಳೆದುಕೊಂಡು ಹೋಗಿ ಸಾಮೂಹಿಕವಾಗಿ ಅತ್ಯಾಚಾರ ಮಾಡಲಾಗಿತ್ತು. ಈ ವೇಳೆ ಕುತ್ತಿಗೆ ಹಿಸುಕಿದ್ದರಿಂದ ಉಸಿರಾಡಲಾಗದೆ ಆಕೆ ಪರದಾಡಿದ್ದಳು. ಹಾಗೇ, ಈ ವೇಳೆ ಆಕೆಯ ನಾಲಿಗೆ ಕೂಡ ಅರ್ಧ ತುಂಡಾಗಿತ್ತು. ಆಕೆಯನ್ನು ಉತ್ತರ ಪ್ರದೇಶದ ಆಸ್ಪತ್ರೆಯಲ್ಲಿ ಐಸಿಯುನಲ್ಲಿರಿಸಲಾಗಿತ್ತು. ಆದರೂ ಆಕೆ ಚೇತರಿಸಿಕೊಳ್ಳದ ಕಾರಣ ದೆಹಲಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮಂಗಳವಾರ ಸಾವನ್ನಪ್ಪಿದ್ದಳು

Leave a Reply