ಹೈಕೋರ್ಟ್ ಮೆಟ್ಟಿಲೇರಿರುವ ಉಡುಪಿಯ ಹಿಜಾಬ್ ವಿವಾದ

ಉಡುಪಿ, ಫೆ.5: ತರಗತಿಯಲ್ಲಿ ಹಿಜಾಬ್ ಧರಿಸಲು ಅಡ್ಡಿಪಡಿಸುತ್ತಿದ್ದಾರೆ ಎಂದು ವಿದ್ಯಾರ್ಥಿನಿಯರು ನ್ಯಾಯಾಲಯದ ಮೊರೆ ಹೋಗಿದ್ದಾರೆ.

ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಆಯೇಷಾ ಹಜೀರಾ ಅಲ್ಮಾಸ್, ರೇಶಮ್ ಫಾರೂಕ್, ಅಲಿಯಾ ಅಸ್ಸಾದಿ, ಶಫಾ, ಶಮೀಮ್, ಮುಸ್ಕಾನ್ ಜೈನಬ್ ಅವರು ಹೈಕೋರ್ಟ್ಗೆ ದೂರು ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಲೇಜು ಪ್ರಾಂಶುಪಾಲರು ಮತ್ತು ಶಾಸಕ ರಘುಪತಿ ಭಟ್ ಮೊದಲಾದವರಿಗೆ ಕೋರ್ಟಿನಿಂದ ನೋಟೀಸು ಜಾರಿಯಾಗಿದೆ. ಒಟ್ಟು 11 ಜನರ ವಿರುದ್ಧ ಮುಸ್ಲಿಂ ಯುವತಿಯರು ಕೋರ್ಟ್ ಮೆಟ್ಟಿಲೇರಿದ್ದಾರೆ.

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ನೇತೃತ್ವದ ಏಕಸದಸ್ಯ ಪೀಠದಿಂದ ವಿಚಾರಣೆ ನಡೆಯುತ್ತಿದ್ದು, ಮಂಗಳವಾರಕ್ಕೆ ವಿಚಾರಣೆಯನ್ನು ಮುಂದೂಡಲಾಗಿದೆ.
ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂಬ ಸರಕಾರದ ಆದೇಶದ ಉಲ್ಲಂಘನೆಯಾಗಿದೆ. ಪದವಿ ಪೂರ್ವ ಕಾಲೇಜು ಉಪ ನಿರ್ದೇಶಕರು ಪ್ರಾಂಶುಪಾಲರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರಲಾಗಿದೆ. ಕಾಲೇಜು ವಿಚಾರದಲ್ಲಿ ಹಸ್ತಕ್ಷೇಪ ಮಾಡುತ್ತಿರುವ ರಘುಪತಿ ಭಟ್ ಮತ್ತು ಯಶಪಾಲ್ ಸುವರ್ಣ ವಿರುದ್ಧ ಕ್ರಮ ಕೈಗೊಳ್ಳುವಂತೆ ಅರ್ಜಿದಾರರು ಮನವಿ ಮಾಡಿದ್ದಾರೆ. ವಿದ್ಯಾರ್ಥಿನಿಯರ ಪರವಾಗಿ ಹೈಕೋರ್ಟಿನಲ್ಲಿ ವಕೀಲ ಮಹಮ್ಮದ್ ತಾಹೀರ್ ಅರ್ಜಿ ಸಲ್ಲಿಸಿದ್ದಾರೆ.

Leave a Reply