ಕುಂದಾಪುರ : ಕೃಷಿ ಯಂತ್ರೋಪಕರಣಗಳ ಬಾಡಿಗೆ ಸೇವಾ ಕೇಂದ್ರ ಉದ್ಘಾಟನೆ

ಕುಂದಾಪುರ, ಅ.೨೦: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ( ರಿ ) ಇವರ ವತಿಯಿಂದ ನೂತನವಾಗಿ ಆರಂಭಿಸುತ್ತಿರುವ ಕೃಷಿ ಯಂತ್ರೋಪಕರಣಗಳ ಬಾಡಿಗೆ ಸೇವಾ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ಕುಂದಾಪುರದ ಕಾಳಾವರದಲ್ಲಿ ನಡೆಯಿತು.
ಉದ್ಘಾಟನಾ ಕಾರ್ಯಕ್ರಮಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರನ್ನು ಕರಾವಳಿಯ ಹೆಸರಾಂತ ಶ್ರೀ ಶನೇಶ್ವರ ಕೇರಳ ಚಂಡೆ ಬಳಗ ಸೈಬ್ರಕಟ್ಟೆ ಇವರ ಅದ್ದೂರಿಯ ಚಂಡೆ ವಾದನದೊಂದಿಗೆ ಪೂಜ್ಯರನ್ನು ಸ್ವಾಗತಿಸಲಾಯಿತು.
ತದನಂತರದಲ್ಲಿ ಕೃಷಿ ಯಂತ್ರೋಪಕರಣಗಳ ಬಾಡಿಗೆ ಸೇವಾ ಕೇಂದ್ರವನ್ನು ಪರಮಪೂಜ್ಯರು ಉದ್ಘಾಟಿಸಿದರು.
ನಂತರ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದ ಕರ್ನಾಟಕ ವಿಧಾನ ಪರಿಷತ್ ಮಾಜಿ ಸಭಾಪತಿ ಶ್ರೀ ಪ್ರತಾಪ್ಚಂದ್ರ ಶೆಟ್ಟಿ ಉದ್ಘಾಟಿಸಿ ಮಾತನಾಡಿ ಸಹಕಾರಿ ಸಂಘದಲ್ಲಿ ಆಗದೇ ಇರುವಂತಹ ಕೆಲಸ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯವರು ಮಾಡಿದ್ದಾರೆ. ಪ್ರತಿಯೊಬ್ಬ ರೈತರಿಗೆ ಬೆಂಬಲ ಬೆಲೆ ಸಿಕ್ಕಿದ್ದಲ್ಲಿ ರೈತರು ಕೂಡ ಉತ್ತಮ ರೀತಿಯಲ್ಲಿ ಬೆಳೆಯನ್ನು ಬೆಳೆಯುತ್ತಾರೆ ಮತ್ತು ಆರ್ಥಿಕವಾಗಿ ಸದೃಢರಾಗುತ್ತಾರೆ ಎಂದು ಹೇಳಿದರು.

ಶ್ರೀಯುತ ಪರಮಪೂಜ್ಯ ವೀರೇಂದ್ರ ಹೆಗ್ಗಡೆಯವರು ಮಾತನಾಡಿ ಕಳೆದ ಎರಡು ವರ್ಷದಿಂದ ಕೊರೊನಾದಿಂದ ಎಲ್ಲರೂ ಕೂಡ ಮನೆಯಲ್ಲಿ ಇದ್ದರು ಆದರೆ ರೈತರು ತಮ್ಮ ಕೆಲಸವನ್ನು ಮಾಡದೆ ಮನೆಯಲ್ಲಿ ಕುಳಿತಿದ್ದರೆ ನಾವು ಇವತ್ತು ಹೊಟ್ಟೆಗೆ ತಣ್ಣೀರು ಬಟ್ಟೆ ಇಟ್ಟುಕೊಳ್ಳುವ ಪರಿಸ್ಥಿತಿ ಎದುರಾಗುತ್ತಿತ್ತು. ಪ್ರತಿಯೊಬ್ಬ ರೈತರು ಯಂತ್ರೋಪಕರಣ ಬಳಸಿ ಆದಾಯ ಹೆಚ್ಚಾಗಬೇಕು ಎನ್ನುವ ದೃಷ್ಟಿಕೋನದಿಂದ ನಾವು ಇವತ್ತು ಯಂತ್ರೋಪಕರಣಗಳ ಬಾಡಿಗೆ ಕೇಂದ್ರವನ್ನು ಉದ್ಘಾಟಿಸಿದ್ದೇವೆ. ಪ್ರತಿ ರೈತರು ತಮ್ಮ ಕೃಷಿಯನ್ನು ಬಿಟ್ಟು ಹೊರಗೆ ಹೋಗಬಾರದು ನಾವೆಲ್ಲರೂ ಸೇರಿ ರೈತರಿಗೆ ಸಹಕಾರ ನೀಡಬೇಕು, ರೈತರು ನಮ್ಮ ದೇಶದ ಬೆನ್ನೆಲುಬು, ಎಂದು ಹೇಳಿದರು.

ಈ ಸಭಾಕಾರ್ಯಕ್ರಮದಲ್ಲಿ ಕುಂದಾಪುರ ಜನಜಾಗ್ರತಿ ವೇದಿಕೆ ಸ್ಥಾಪಕಾಧ್ಯಕ್ಷ ಶ್ರೀ ಬಿ ಅಪ್ಪಣ್ಣ ಹೆಗಡೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ( ರಿ) ಇದರ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ| ಎಲ್ ಹೆಚ್ ಮಂಜುನಾಥ್, ಕಾಳಾವರ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಆಶಾಲತ ಶೆಟ್ಟಿ, ಕುಂದಾಪುರ ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕಿ ಶ್ರೀಮತಿ ರೂಪಾ ಜೆ ಮಾಡ, ಕೃಷಿ ಯಂತ್ರೋಪಕರಣಗಳ ಸೇವಾ ಕೇಂದ್ರಕ್ಕೆ ಸ್ಥಳಾವಕಾಶ ಮಾಡಿಕೊಟ್ಟಿರುವ ಸುಚಿತ್ ಕುಮಾರ್ ಶೆಟ್ಟಿ, ವಸಂತ್ ಸಾಲಿಯಾನ್, ಅಬ್ರಹಮ್ ಮೊದಲಾದ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Leave a Reply