ಶಾಲಾ ಮಕ್ಕಳಿಗೆ ಕೊರೊನಾ ಲಸಿಕೆಯನ್ನು ಶಾಲೆಗಳಲ್ಲಿಯೇ ನೀಡಲಾಗುತ್ತದೆ – ಬಿ.ಸಿ.ನಾಗೇಶ್

ಬೆಂಗಳೂರು,ಅ.೧೮:ಶಾಲಾ ಮಕ್ಕಳಿಗೆ ಕೊರೊನಾ ಲಸಿಕೆಯನ್ನು ಶಾಲೆಗಳಲ್ಲಿಯೇ ನೀಡಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, “ರಾಜ್ಯದಲ್ಲಿ 1 ರಿಂದ 5ನೇ ತರಗತಿ ಶಾಲೆಗಳ ಆರಂಭ ಕುರಿತು ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಿಕ್ಷಣ ತಜ್ಞರು ಹಾಗೂ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಚರ್ಚಿಸಿ, ನಿರ್ಧಾರ ಪ್ರಕಟಿಸಲಾಗುತ್ತದೆ” ಎಂದರು.
ಇನ್ನು ರಾಜ್ಯದಲ್ಲಿ ಎಲ್ಲಾ ಶಾಲೆಗಳು ಆರಂಭಗೊಂಡ ಬಳಿಕ ಮಧ್ಯಾಹ್ನದ ಬಿಸಿಯೂಟ ಯೋಜನೆ ಕೂಡ ಪುನರಾರಂಭಿಸಲಾಗುತ್ತದೆ” ಎಂದು ತಿಳಿಸಿದ್ದಾರೆ.

Leave a Reply